ಉಡುಪಿ:ಕರ್ನಾಟಕ ಕ್ರೀಡಾಕೂಟವನ್ನು ಯಶಸ್ವಿಗೊಳಿಸಲು ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಉಡುಪಿ: ಜಿಲ್ಲೆಯಲ್ಲಿ ಜನವರಿ 17 ರಿಂದ 23 ರ ವರೆಗೆ ಕರ್ನಾಟಕ ಕ್ರೀಡಾಕೂಟವನ್ನು ಸುವ್ಯವಸ್ಥಿತವಾಗಿ ನಡೆಸಲು ರಚಿಸಿರುವ ಸಮಿತಿಯ ಸದಸ್ಯರುಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ, ಕ್ರೀಡಾಕೂಟವನ್ನು ಯಶಸ್ವಿಗೊಳಿಸಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಕ್ರೀಡಾಕೂಟ -2025 ಆಯೋಜನೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟದಲ್ಲಿ ಭಾಗವಹಿಸಲು ಆಗಮಿಸುವ ಕ್ರೀಡಾ ಪಟುಗಳಿಗೆ, ತೀರ್ಪುಗಾರರಿಗೆ […]