ಕಾಸರಗೋಡು: ಆಟವಾಡುವಾಗ ಗೇಟ್ ಮಗುಚಿ ಬಿದ್ದು ಎರಡೂವರೆ ವರ್ಷದ ಬಾಲಕ ಮೃತ್ಯು.

ಕಾಸರಗೋಡು: ಗೇಟ್ ಮಗುಚಿ ಬಿದ್ದು ಎರಡೂವರೆ ವರ್ಷದ ಬಾಲಕ ಮೃತಪಟ್ಟ ಘಟನೆ ಮಾಂಙಾಡ್ ನಲ್ಲಿ ನಡೆದಿದೆ. ಮೃತ ಪಟ್ಟ ಬಾಲಕ ಉದುಮ ಪಳ್ಳದ ತೆಕ್ಕೇಕರೆಯ ಮಾಹಿನ್ ರಾಸಿ – ರೆಹಿಮಾ ದಂಪತಿ ಪುತ್ರ ಅಬು ತ್ವಾಹೀರ್. ಮಾಂಗಾಡ್‌ನ ಕುಲಿಕುನ್ನಂನ ಸಂಬಂಧಿಯೊಬ್ಬರ ಮನೆಯಲ್ಲಿ ಈ ಘಟನೆ ನಡೆದದ್ದು, ಆಟವಾಡುತ್ತಿದ್ದ ಬಾಲಕನ ಮೇಲೆ ಕಬ್ಬಿಣದ ಗೇಟ್ ಬಿದ್ದಿದೆ. ಅದರಡಿ ಸಿಲುಕಿದ ಬಾಲಕನನ್ನು ಕೂಡಲೇ ಕಾಸರಗೋಡಿನ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ ಎಂದು ತಿಳಿದುಬಂದಿದು‌.