ಉಡುಪಿ: ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದಿದ್ದ ಕಾಪುವಿನ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ದೃಢ

ಉಡುಪಿ: ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದಿದ್ದ ಕಾಪು ತಾಲ್ಲೂಕಿನ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ಇರುವುದು ಖಚಿತಗೊಂಡಿದೆ ಎಂದು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಈ ವಿದ್ಯಾರ್ಥಿನಿ ಜೂ. 25ರಂದು ಕನ್ನಡ ಹಾಗೂ ಜೂ. 27ರಂದು ಗಣಿತ ಪರೀಕ್ಷೆ ಬರೆದಿದ್ದಳು. ಈಕೆಯ ತಂದೆಗೆ ಜೂ. 27 ರಂದು ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಈಕೆಯ ಗಂಟಲಿನ ದ್ರವದ ಮಾದರಿಯನ್ನು ಪರೀಕ್ಷೆ ಕಳುಹಿಸಲಾಗಿತ್ತು. ಅದರ ವರದಿ ಇಂದು ಬಂದಿದ್ದು, ಸೋಂಕು ಇರುವುದು ಖಚಿತಗೊಂಡಿದೆ. […]