ಉಡುಪಿ:ಜಿಲ್ಲೆಯಲ್ಲಿ ಕೆ.ಎಫ್ .ಡಿ ಪ್ರಕರಣಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ -ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಕ್ಯಾಸನೂರು ಅರಣ್ಯ ರೋಗವು ಅಥವಾ ಮಂಗನ ಜ್ವರ ಕಾಯಿಲೆಯು ಸಾಮಾನ್ಯವಾಗಿನವೆಂಬರ್‌ನಿಂದ ಜೂನ್‌ವರೆಗೆ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆ, ಇವುಗಳ ನಿಯಂತ್ರಣಕ್ಕೆ ಇಲಾಖೆಗಳ ಸಮಾನ್ವಯದೊಂದಿಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೆ.ಎಫ್.ಡಿ ಹಾಗೂ ಇತರ ಪ್ರಾಣಿ ಜನ್ಯ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲು ಆಯೋಜಿಸಲಾದ ಅಂತರ್ ಇಲಾಖಾ […]