ಉಡುಪಿ: ಆರನೇ ದಿನಕ್ಕೆ ಕಾಲಿಟ್ಟ ಕೊರಗರ ಅಹೋರಾತ್ರಿ ಧರಣಿ ಸತ್ಯಾಗ್ರಹ

ಉಡುಪಿ: ಕೊರಗ ಸಮುದಾಯದ ಯುವಜನತೆಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ಹಾಗೂ ಕೃಷಿಭೂಮಿ ಹಕ್ಕುಪತ್ರ ಮಂಜೂರಾತಿಗೆ ಆಗ್ರಹಿಸಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ -ಕೇರಳ ಇದರ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಆರನೇ ದಿನಕ್ಕೆ ಕಾಲಿಟ್ಟಿದೆ.ಮಳೆಯ ಮಧ್ಯೆಯೂ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೊರಗ ಸಮುದಾಯದ ಮಕ್ಕಳು, ಮಹಿಳೆಯರು, ವೃದ್ಧರು ಧರಣಿ ನಡೆಸುತ್ತಿದ್ದು, ಅಲ್ಲೇ ಮಧ್ಯಾಹ್ನ, ರಾತ್ರಿಯ ಅಡುಗೆಯನ್ನು ತಯಾರಿಸಿ, ಊಟ ಮಾಡಿ ಧರಣಿಯನ್ನು ಮುಂದುವರೆಸಿದ್ದಾರೆ. ಸುಮಾರು 100 […]
ಜುಲೈ 18ರಂದು ಉದ್ಯೋಗ ಭರವಸೆ, ಕೃಷಿ ಭೂಮಿ ಹಕ್ಕುಪತ್ರ ಮಂಜುರಾತಿಗಾಗಿ ಆಗ್ರಹಿಸಿ ವಾಹನ ಜಾಥಾ

ಉಡುಪಿ: ಕೊರಗ ಸಮುದಾಯದ ಯುವ ಜನರ ಶೇ.100ರಷ್ಟು ಉದ್ಯೋಗ ಭರವಸೆ ಈಡೇರಿಕೆ ಹಾಗೂ ಕೃಷಿ ಭೂಮಿ ಹಕ್ಕುಪತ್ರ ಮಂಜುರಾತಿಗಾಗಿ ಆಗ್ರಹಿಸಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ-ಕೇರಳ ಇದರ ನೇತೃತ್ವದಲ್ಲಿ ನಾಳೆ (ಜುಲೈ 18) ಕಾಪುವಿನಿಂದ ಬ್ರಹ್ಮಾವರದವರೆಗೆ ಕಾರು, ಆಟೋ ರಿಕ್ಷಾ, ಬೈಕ್, ಸ್ಕೂಟರ್ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ಅಲ್ಲದೆ, ಜುಲೈ 22ರಂದು ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಅಹೋ ರಾತ್ರಿ ನಿರಂತರ ಧರಣಿ ಸತ್ಯಾಗ್ರಹವನ್ನು ನಡೆಸಲಾಗುವುದು ಎಂದು ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ಅಧ್ಯಕ್ಷೆ ಸುಶೀಲಾ ನಾಡ […]