ಉಡುಪಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ 37 ವರ್ಷ ಜೈಲುಶಿಕ್ಷೆ

ಉಡುಪಿ: ಎರಡು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಬಳಿಕ ಲೈಂಗಿಕ ದೌರ್ಜನ್ಯ ಎಸಗಿದ ಪೋಕ್ಸೊ ಆರೋಪಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯವು 37 ವರ್ಷಗಳ ಕಾಲ ಜೈಲುಶಿಕ್ಷೆ ವಿಧಿಸಿ ಆದೇಶ ನೀಡಿದೆ. 2022ರಲ್ಲಿ ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಕೋಟ ನಿವಾಸಿ ಸಚಿನ್ ಪೂಜಾರಿ(26) ಶಿಕ್ಷೆಗೆ ಒಳಗಾದ ಆರೋಪಿ. ಈತ ನೊಂದ ಬಾಲಕಿಯ ಮನೆ ಕೆಲಸಕ್ಕೆ ಬರುತ್ತಿದ್ದವಳ ಸಂಬಂಧಿಕನಾಗಿದ್ದು, ಆಕೆಯಿಂದ ಬಾಲಕಿಯ ಮೊಬೈಲ್ ನಂಬರ್ ಪಡೆದುಕೊಂಡು ಮೊಬೈಲ್‌ನಲ್ಲಿ […]