ಉಡುಪಿ: ಕೋಟ ಶ್ರೀನಿವಾಸ ಪೂಜಾರಿಯಿಂದ ತೆರವಾದ ವಿಧಾನ ಪರಿಷತ್ ಸ್ಥಾನಕ್ಕೆ ಬಿಜೆಪಿಯಲ್ಲಿ ಭಾರೀ ಪೈಪೋಟಿ: ಗೀತಾಂಜಲಿ ಸುವರ್ಣ ಹೆಸರು ಮುಂಚೂಣಿಗೆ.

ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾದ ಕೋಟ ಅವರ ಸ್ಥಾನಕ್ಕೆ ಯಾರು ಎಂಬ ಪ್ರಶ್ನೆ ಉದ್ಭವ ವಾಗುತ್ತಲೇ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪೈಪೋಟಿ ಶುರುವಾಗಿದ್ದು, ಜಾತಿ ಲೆಕ್ಕಾಚಾರ, ಪಕ್ಷದಲ್ಲಿನ ಹಿರಿತನ ಎಲ್ಲವೂ ಗಣನೆಗೆ ತೆಗೆದುಕೊಂಡು ತೆರೆಮರೆಯಲ್ಲಿ ಕಸರತ್ತು ನಡೆಯುತ್ತಿದೆ. ಈ ನಡುವೆ ಸಾರ್ವಜನಿಕ ವಲಯದಲ್ಲಿ ಸದಾ ಸಮಾಜ ಸೇವೆಯಲ್ಲಿ ತಮನ್ನು ತಾವು ತೊಡಗಿಸಿಕೊಳ್ಳುವ ಬಿಲ್ಲವ ಸಮುದಾಯದ ಶ್ರೀಮತಿ ಗೀತಾಂಜಲಿ ಸುವರ್ಣ ಅವರ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿದೆ. ಇವರು ರಾಜಕೀಯವಾಗಿ 2 ಬಾರಿ ಪಡುಬಿದ್ರಿ ಮತ್ತು ಕುರ್ಕಾಲುವಿನ ಜಿಲ್ಲಾ […]