ಉಡುಪಿ:ಜಕಣಾಚಾರಿ ಶಿಲ್ಪಕಲೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಧೀಮಂತ : ಸಂಸದ ಕೋಟ ಶ್ರೀನಿವಾಸ ಪೂಜಾರಿ
ಉಡುಪಿ: ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರ್ಯರು ಕರ್ನಾಟಕದಲ್ಲಿ ಶಿಲ್ಪಕಲೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ. ಬೇಲೂರು ಹಾಗೂ ಹಳೇಬೀಡು ದೇವಸ್ಥಾನಕ್ಕೆ ಅವರ ಶಿಲ್ಪಕಲೆಯ ಕೊಡುಗೆಯು ಅಪಾರವಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಭಾಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಶೋಕಾಚರಣೆ ಹಿನ್ನೆಲೆ, […]