ಉಡುಪಿ: ಕೋವಿಡ್ ಲಸಿಕಾ ಅಭಿಯಾನಕ್ಕೆ ಚಾಲನೆ

ಉಡುಪಿ: ಕೋವಿಡ್ ಲಸಿಕಾ ಅಭಿಯಾನಕ್ಕೆ ಉಡುಪಿ ಅಜ್ಜರಕಾಡಿನ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಇಂದು ಚಾಲನೆ ನೀಡಲಾಯಿತು. ಪ್ರಧಾನಿ ನರೇಂದ್ರ ಮೋದಿಯವರು ದೇಶವ್ಯಾಪಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಸಂದರ್ಭದಲ್ಲಿಯೇ ಜಿಲ್ಲೆಯಲ್ಲೂ ಲಸಿಕಾ ಕಾರ್ಯಕ್ರಮದ ಉದ್ಘಾಟನೆ ನಡೆಯಿತು. ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಸಕರಾದ ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಜಿಲ್ಲಾಧಿಕಾರಿ ಜಿ. ಜಗದೀಶ್, ಜಿಪಂ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ […]