ಉಡುಪಿ: ಸಂಸದೆ ಶೋಭಾ ಕರಂದ್ಲಾಜೆರಿಂದ ಕೋವಿಡ್ ನಿರ್ವಹಣೆ, ತೌಕ್ತೆ ಚಂಡಮಾರುತದ ಹಾನಿಯ ಅವಲೋಕನ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಎರಡನೇ ಅಲೆಯಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆಯವರು ಕಳೆದ ಎಂಟು ದಿನಗಳಲ್ಲಿ ಇದೀಗ ಎರಡನೇ ಬಾರಿಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೋವಿಡ್ ನಿರ್ವಹಣೆಯ ಕುರಿತು ಪರಿಶೀಲನೆ ನಡೆಸಿದರು. ಕೋವಿಡ್-19 ಸೋಂಕು ತಗುಲಿ ಚಿಕಿತ್ಸೆ ಪಡೆಯುತ್ತಿರುವ ಜಿಲ್ಲೆಯ ನಾಗರೀಕರಿಗೆ ಬೆಡ್ ಹಂಚಿಕೆ, ಆಕ್ಸಿಜನ್ ಪೂರೈಕೆ, ರೆಮಿಡಿಸಿವರ್ ಸರಬರಾಜು, ವ್ಯಾಕ್ಸೀನ್ ನೀಡುವಿಕೆಯೇ ಮೊದಲಾದ ವಿಚಾರಗಳ ಬಗ್ಗೆ ಕೂಲಂಕುಷವಾಗಿ ಮಾಹಿತಿಯನ್ನು ಪಡೆದುಕೊಂಡ ಸಂಸದೆ ಶೋಭಾ ಕರಂದ್ಲಾಜೆ, ಆಸ್ಪತ್ರೆಗಳಿಗೆ ದಾಖಲಾಗುವ ಜಿಲ್ಲೆಯ […]