ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಮಾಸೋತ್ಸವ: ಆಕರ್ಷಕ ಸಾಂಪ್ರದಾಯಿಕ ಸ್ಪರ್ಧೆ

ಉಡುಪಿ: ಉಡುಪಿ ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠದ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಮಾಸೋತ್ಸವದಲ್ಲಿ ವಿವಿಧ ಆಕರ್ಷಕ ಸಾಂಪ್ರದಾಯಿಕ ಸ್ಪರ್ಧೆಗಳನ್ನು ಆ.27ರಂದು ಸಂಜೆ 4ಗಂಟೆಗೆ ರಾಜಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಪರ್ಯಾಯ ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ. ಉಡುಪಿ ಶ್ರೀಕೃಷ್ಣ ಮಠದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಲಿವೇಷ ಸ್ಪರ್ಧೆಯಲ್ಲಿ ವಿಜೇತ ತಂಡಕ್ಕೆ ಪ್ರಥಮ 1.15ಲಕ್ಷ ರೂ. ವೌಲ್ಯದ ಟಿವಿಎಸ್ ಎಲೆಕ್ಟ್ರಿಕಲ್ ಸ್ಕೂಟರ್, ದ್ವಿತೀಯ 50ಸಾವಿರ ರೂ., ತೃತೀಯ 25ಸಾವಿರ ರೂ., ಜಾನಪದ ವೇಷ ಸ್ಪರ್ಧೆಯಲ್ಲಿ ಪ್ರಥಮ 25ಸಾವಿರ […]