ಆ.1ರಿಂದ ಸೆ.1ರ ವರೆಗೆ ಉಡುಪಿ ಕೃಷ್ಣಮಠದಲ್ಲಿ ಶ್ರೀಕೃಷ್ಣ ಮಾಸೋತ್ಸವ; ಪರ್ಯಾಯ ಪುತ್ತಿಗೆ ಶ್ರೀ

ಉಡುಪಿ: ಉಡುಪಿ ಶ್ರೀಕಷ್ಣ ಮಠದಲ್ಲಿ ಕೃಷ್ಣ ಜನ್ಮಾಷ್ಟಮಿಯನ್ನು ಈ ಬಾರಿ ಅತ್ಯಂತ ವೈಭವ ಪೂರ್ಣವಾಗಿ ಆಚರಿಸಲು ಉದ್ದೇಶಿಸಲಾಗಿದೆ. ಅದರಂತೆ ಆಗಸ್ಟ್ 1ರಿಂದ ಸೆಪ್ಟೆಂಬರ್ 1ರವರೆಗೆ ಒಂದು ತಿಂಗಳ ಕಾಲ ಶ್ರೀಕೃಷ್ಣ ಮಾಸೋತ್ಸವ, ಕೃಷ್ಣಜನ್ಮಾಷ್ಟಮಿ ಶ್ರೀಕಷ್ಣ ಲೀಲೋತ್ಸವ, ಲಡ್ಡೋತ್ಸವ, ಸಾಮೂಹಿಕ ಡೋಲೋತ್ಸವ ನಡೆಯಲಿದೆ ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಸ್ವಾಮೀಜಿ ತಿಳಿಸಿದ್ದಾರೆ. ಉಡುಪಿ ಕೃಷ್ಣಮಠದ ಕನಕ ಮಂಟಪದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ವಿಶೇಷವಾಗಿ ಲಡ್ಡೋತ್ಸವದಲ್ಲಿ 108 ಬಗೆಯ ಲಡ್ಡುಗಳನ್ನು ತಯಾರಿಸಿ ಭಕ್ತರಿಗೆ ವಿತರಿಸಲಾಗುವುದು. […]