ಉಡುಪಿ: ಆ.26ರಂದು ಟೈಗರ್ಸ್ ಫ್ರೆಂಡ್ಸ್ ನ ಅಬ್ಬರದ ಉಡುಪಿ ಪಿಲಿನಲಿಕೆ ಕಾರ್ಯಕ್ರಮ

ಉಡುಪಿ: ಶ್ರೀಕೃಷ್ಣಾ ಜನ್ಮಾಷ್ಟಮಿಯ ಪ್ರಯುಕ್ತ ಟೈಗರ್ಸ್ ಫ್ರೆಂಡ್ಸ್ ಉಡುಪಿ ವತಿಯಿಂದ ತೃತೀಯ ವರ್ಷದ “ಅಬ್ಬರದ ಉಡುಪಿ ಪಿಲಿನಲಿಕೆ ಕಾರ್ಯಕ್ರಮ” ಇದೇ ಆ.26ರಂದು ಕುಂಜಿಬೆಟ್ಟು ಮೀನುಮಾರುಕಟ್ಟೆ ಬಳಿಯ ವೇದಿಕೆಯಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಗೌರವ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದರು. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸಂಜೆ 4.30ಕ್ಕೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಅಧ್ಯಕ್ಷತೆ ವಹಿಸಲಿದ್ದಾರೆ. ದೊಡ್ಡಣಗುಡ್ಡೆ ಶ್ರೀ ದುರ್ಗಾ ಕ್ಷೇತ್ರದ ಧರ್ಮದರ್ಶಿ ರಮಾನಂದ ಗುರೂಜಿ […]