ದೇಶೀಯ ಉತ್ಪನ್ನಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು: ಈಶಪ್ರಿಯ ಶ್ರೀ

ಉಡುಪಿ: ಇಂದು ದೇಶೀಯ ಉತ್ಪನ್ನಗಳಿಗೆ ಹೆಚ್ಚಿನ ಆದ್ಯತೆ ನೀಡುವುದರ ಜತೆಗೆ ಅವುಗಳ ಬಳಕೆ ಮಾಡಬೇಕು ಎಂದು ಪರ್ಯಾಯ ಅದಮಾರು ಮಠದ ಈಶಪ್ರಿಯ ಸ್ವಾಮೀಜಿ ಹೇಳಿದರು. ಕೃಷ್ಣಮಠದ ರಾಜಾಂಗಣದಲ್ಲಿ ಮಂಗಳವಾರ ಕೃಷಿಕ ಅಬೂಬಕ್ಕರ್‌ ಮತ್ತು ನೇಕಾರ ಸಂಜೀವ ಶೆಟ್ಟಿಗಾರ್‌ ಕೊರಂಗ್ರಪಾಡಿ ಅವರನ್ನು ಸನ್ಮಾನಿಸಿ ಮಾತನಾಡಿದರು. ಭಾರತೀಯ ಸಂಸ್ಕೃತಿ, ಕಲೆ, ಪರಂಪರೆಯನ್ನು ಉಳಿಸಬೇಕಾದರೆ ದೇಶೀಯ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡುವ ಕೆಲಸ ಮಾಡಬೇಕು. ಯುವಜನರಿಗೆ ದೇಶೀಯ ಉತ್ಪನ್ನಗಳ ಮಹತ್ವವನ್ನು ತಿಳಿಸಬೇಕು. ಆಗ ನಮ್ಮ ತನವನ್ನು ಉಳಿಸಿಕೊಳ್ಳಲು ಸಾಧ್ಯವಿದೆ ಎಂದರು. ನೇಕಾರಿಕೆ ಬಹಳ […]