ಭಂಡಾರಿಕೇರಿ ಮಠಾಧೀಶರ ಚಾತುರ್ಮಾಸ್ಯ ವ್ರತ ಸಂಪನ್ನ
ಉಡುಪಿ: ಭಂಡಾರಿಕೇರಿ ಮಠಾಧೀಶರು 37 ವರ್ಷಗಳ ಬಳಿಕ ಉಡುಪಿಯಲ್ಲಿ ತಮ್ಮ 45ನೇ ಚಾತುರ್ಮಾಸ್ಯ ವ್ರತವನ್ನು ನಡೆಸಿದ್ದಾರೆ. ಇದೇ ವೇಳೆ 70ನೇ ಜನ್ಮ ವರ್ಧಂತಿಯನ್ನು ಕಾಣುತ್ತಿರುವ ಶ್ರೀ ಭಂಡಾರಕೇರಿ ಮಠಾಧೀಶರಾದ ಶ್ರೀ ವಿದ್ಯೆಶತೀರ್ಥ ಶ್ರೀಪಾದರಿಗೆ ಪರ್ಯಾಯ ಪುತ್ತಿಗೆ ಮಠ ಶ್ರೀ ಕೃಷ್ಣಮಠದ ವತಿಯಿಂದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ನೇತೃತ್ವದಲ್ಲಿ ಅಭಿನಂದನೋತ್ಸವ ನಡೆಯಿತು. ಉಡುಪಿ ರಥಬೀದಿಯಲ್ಲಿ ಶ್ರೀ ಭಂಡಾರಕೇರಿ ಮಠದ ಪಟ್ಟದ ದೇವರಾದ ಶ್ರೀ ಕೋದಂಡರಾಮದೇವರ ಸ್ವರ್ಣ ರಥೋತ್ಸವ ನೆರವೇರಿದ ಬಳಿಕ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ನಡೆದ ವಿಶಿಷ್ಟ ಕಾರ್ಯಕ್ರಮದಲ್ಲಿ […]