ಉಡುಪಿ ಕೃಷ್ಣಮಠದ ಗಣಪತಿಯ ವಿಸರ್ಜನೆ ಮೆರವಣಿಗೆ

ಉಡುಪಿ: ಗಣೇಶ ಚತುರ್ಥಿಯ ಪ್ರಯುಕ್ತ ಶ್ರೀ ಕೃಷ್ಣಮಠದಲ್ಲಿ ಹಾಗೂ ಗೀತಾಮಂದಿರದಲ್ಲಿ ಪೂಜಿಸಲ್ಪಟ್ಟ ಗಣಪತಿಯ ವಿಸರ್ಜನೆ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು. ಗಣಪತಿ ಮೂರ್ತಿಯನ್ನು ಆಕರ್ಷಕ ಟ್ಯಾಬ್ಲೋದಲ್ಲಿಟ್ಟು ರಥಬೀದಿಯಲ್ಲಿ ಮೆರವಣಿಗೆ ಮಾಡಲಾಯಿತು. ಈ ಸಂದರ್ಭದಲ್ಲಿ ಹುಲಿವೇಷ, ರಕ್ಕಸ ವೇಷ, ವಾದ್ಯ, ಬ್ಯಾಂಡು ಮೆರವಣಿಗೆಯ ಮೆರುಗು ಹೆಚ್ಚಿಸಿತು. ತಾಸೆಯ ಸದ್ದಿಗೆ ಭಕ್ತರು ಕುಣಿದು ಕುಪ್ಪಳಿಸಿದರು. ಮೆರವಣಿಗೆಯಲ್ಲಿ ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಹಾಗೂ ಸುಶೀಂದ್ರತೀರ್ಥ ಶ್ರೀಪಾದರು, ಮಠದ ದಿವಾನ ನಾಗರಾಜ್ ಆಚಾರ್ಯ, ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಹಾಗೂ ನೂರಾರು ಮಂದಿ […]