ಆ. 1ರಿಂದ 11ರವರೆಗೆ ಉಡುಪಿಯಲ್ಲಿ ‘ಕೈಮಗ್ಗ ಸೀರೆಗಳ ಉತ್ಸವ’

ಉಡುಪಿ: ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಅಂಗವಾಗಿ ಆಗಸ್ಟ್ 1ರಿಂದ 11ರ ವರೆಗೆ ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ‘ಕೈಮಗ್ಗ ಸೀರೆಗಳ ಉತ್ಸವ- 2024’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಉಡುಪಿ ಪದ್ಮಶಾಲಿ ನೇಕಾರ ಪ್ರತಿಷ್ಠಾನದ ಅಧ್ಯಕ್ಷ ರತ್ನಾಕರ್ ಇಂದ್ರಾಳಿ ತಿಳಿಸಿದರು. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ಪದ್ಮಶಾಲಿ ನೇಕಾರ ಪ್ರತಿಷ್ಠಾನದ ಆಯೋಜನೆ ಹಾಗೂ ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘದ ಸಹಭಾಗಿತ್ವದಲ್ಲಿ ಈ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದರು. […]