ಉಡುಪಿ ಶ್ರೀಕೃಷ್ಣಮಠದಲ್ಲಿ ಕದಿರುಕಟ್ಟುವ ಹಬ್ಬ

ಉಡುಪಿ: ಉಡುಪಿ ಶ್ರೀಕೃಷ್ಣಮಠದಲ್ಲಿ ಕದಿರುಕಟ್ಟುವ ಹಬ್ಬವು ಶನಿವಾರ ಸಂಭ್ರಮದಿಂದ ನಡೆಯಿತು.ಮಠದ ಪುರೋಹಿತರು ಸಮೀಪದ ಗದ್ದೆಯಲ್ಲಿ ನೂತನವಾಗಿ ಬೆಳೆದ ಭತ್ತದ ಕದಿರಿಗೆ ಪೂಜೆ ಸಲ್ಲಿಸಿದ ಬಳಿಕ ರಥಬೀದಿಗೆ ತಂದು ಸ್ವರ್ಣಪಲ್ಲಕ್ಕಿಯಲ್ಲಿಟ್ಟು ವಾದ್ಯ, ಮಂತ್ರಘೋಷ ಸಹಿತ ಸಾಂಪ್ರದಾಯಿಕ ಬಿರುದಾವಳಿಗಳೊಂದಿಗೆ ಮೆರವಣಿಗೆಯಲ್ಲಿ ಕೃಷ್ಣಮಠಕ್ಕೆ ತರಲಾಯಿತು. ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಹಾಗೂ‌ ಕಿರಿಯ ಸುಶೀಂದ್ರತೀರ್ಥ ಶ್ರೀದಾರರು, ಮಠದ ಪುರೋಹಿತರನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು. ವರ್ಷಕ್ಕೆರಡು ಬಾರಿ ತೆರೆಯುವ ಗರ್ಭಗುಡಿಯ ಮೂಡಣ ದ್ವಾರ:ಕದಿರನ್ನು ಶ್ರೀಕೃಷ್ಣನ ಗರ್ಭಗುಡಿಯ ಮೂಡಣದ್ವಾರದ ಮೂಲಕವೇ ಒಳ ತಂದು ಕೃಷ್ಣನ […]