ಉಡುಪಿ ಶ್ರೀಕೃಷ್ಣಮಠಕ್ಕೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ.

ಉಡುಪಿ: ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೆ. 29ರ ರವಿವಾರ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣ ದೇವರ ದರ್ಶನ ಪಡೆದರು. ಆ ಬಳಿಕ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರಿಂದ ಮಂತ್ರಾಕ್ಷತೆ ಪಡೆದರು.