ಕೃಷ್ಣನಗರಿ ಉಡುಪಿಯಲ್ಲಿ ಕುಡುಕರ ಹಾವಳಿ; ಸಾರ್ವಜನಿಕರಿಗೆ ನಿತ್ಯ ಕಿರಿಕಿರಿ
ಉಡುಪಿ: ಉಡುಪಿಯ ಬಸ್ ನಿಲ್ದಾಣಗಳಲ್ಲಿ ಹೊರಜಿಲ್ಲೆಗಳ ವಲಸೆ ಕಾರ್ಮಿಕರು ವಿಪರೀತ ಪಾನಮತ್ತರಾಗಿ ಬಿದ್ದಿರುವುದು ಕಂಡುಬರುತ್ತಿದೆ. ಇದರಿಂದ ಪ್ರಯಾಣಿಕರು ಹಾಗೂ ಸಾರ್ವಜನಿಕರು ತೀರಾ ತೊಂದರೆ ಎದುರಿಸುವಂತಾಗಿದೆ. ಸಂಜೆಯಾಗುತ್ತಲೇ ಉಡುಪಿ ಸಿಟಿ ಬಸ್ ನಿಲ್ದಾಣ, ನರ್ಮ್ ಬಸ್ ನಿಲ್ದಾಣ ಸೇರಿದಂತೆ ಸುತ್ತಮತ್ತಲು ಮದ್ಯ ವ್ಯಸನಿ ಕಾರ್ಮಿಕರು ಪಾನಮತ್ತರಾಗಿ ಪರಸ್ಪರ ಗಲಾಟೆ ಮಾಡುವುದು, ಕಚ್ಚಾಡಿಕೊಳ್ಳುವುದು, ಹೊಡೆದಾಡಿಕೊಳ್ಳುತ್ತಿದ್ದಾರೆ. ಇದೀಗ ಇವರು ಸ್ಥಳೀಯರ ಮೇಲೂ ಏರಿ ಬರುತ್ತಿರುವುದು ಕಂಡುಬಂದಿದೆ. ಅಲ್ಲೇ ಮಲಗುವುದು, ಅಲ್ಲೇ ಊಟ, ಅಲ್ಲೇ ಮದ್ಯ ಸೇವನೆ, ಅಲ್ಲಿಯೇ ಜೂಜಾಡುತ್ತಾರೆ. ಮತ್ತೆ ವಿನಾಕಾರಣ […]