ಉಡುಪಿ ಕೃಷ್ಣಮಠದಲ್ಲಿ ಶ್ರೀಕೃಷ್ಣ ಮಾಸೋತ್ಸವಕ್ಕೆ ಚಾಲನೆ

ಉಡುಪಿ: ಉಡುಪಿ ಶ್ರೀಕೃಷ್ಣಮಠ ಪುತ್ತಿಗೆ ಪರ್ಯಾಯ ಮಠದ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ವೈಭವ ಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಒಂದು ತಿಂಗಳ ಕಾಲ ಹಮ್ಮಿಕೊಂಡಿರುವ ಶ್ರೀಕೃಷ್ಣ ಮಾಸೋತ್ಸವಕ್ಕೆ ಕೃಷ್ಣಮಠದ ರಾಜಾಂಗಣದಲ್ಲಿ ಚಾಲನೆ ನೀಡಲಾಯಿತು. ಶ್ರೀಕೃಷ್ಣ ಮಾಸೋತ್ಸವ ಉದ್ಘಾಟಿಸಿ ಮಾತನಾಡಿದ ಅದಮಾರು ಮಠದ ವಿಶ್ವಪ್ರಿಯತೀರ್ಥ ಶ್ರೀಪಾದರು, ಭಗವದ್ಗೀತೆ ನಮ್ಮ ದೇಶಕ್ಕೆ ಸಂಸ್ಕೃತಿಯನ್ನು ತಿಳಿಸುವ ಬಹುದೊಡ್ಡ ಸಂಪತ್ತು. ಕೃಷ್ಣ ದೇವರನ್ನು ಪ್ರತಿದಿನ ಉಪಾಸನೆ ಮಾಡುವ ಕೆಲಸವಾಗಬೇಕು. ನಮ್ಮ ಧರ್ಮದ ಮೇಲೆ ಪ್ರಹಾರವಾದಾಗ ಅತಿವೃಷ್ಟಿ, ಅನಾವೃಷ್ಟಿ ಆಗುತ್ತದೆ. ಧರ್ಮ, ಸಂಸ್ಕೃತಿಯ ನಾಶಕ್ಕೆ ಪ್ರಯತ್ನಿಸಿದರೆ […]