ಉಡುಪಿ:ಕೆ.ಎಸ್.ಆರ್.ಟಿ.ಸಿ ನಿಗಮವು ವಿದ್ಯಾರ್ಥಿ ಸ್ನೇಹಿ ಸಾರಿಗೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು: ಡಾ. ತಿಪ್ಪೇಸ್ವಾಮಿ

ಉಡುಪಿ: ಮಕ್ಕಳಿಗೆ ಶಿಕ್ಷಣ ಮೂಲಭೂತ ಹಕ್ಕು. ಕೇವಲ ಹಕ್ಕುಗಳನ್ನು ನೀಡಿದರೆ ಸಾಲದು, ಅದನ್ನು ಪಡೆಯಲು ಅಗತ್ಯವಾದ ಪೂರಕ ವ್ಯವಸ್ಥೆಗಳನ್ನು ಕಲ್ಪಿಸಿದಾಗ ಮಾತ್ರ ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಮಕ್ಕಳಿಗೆ ಶಿಕ್ಷಣವನ್ನು ಪಡೆದುಕೊಳ್ಳಲು ಸಾರಿಗೆ ವ್ಯವಸ್ಥೆ ಬಹುಮುಖ್ಯ ಪಾತ್ರವಹಿಸುತ್ತದೆ. ಆದರೆ ಇತ್ತೀಚೆಗೆ ಸಾರಿಗೆ ಸಂಬಂಧಿತ ಸಮಸ್ಯೆಗಳನ್ನು ಮಕ್ಕಳು ಎದುರಿಸುತ್ತಿದ್ದು ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ವಿದ್ಯಾರ್ಥಿ ಸ್ನೇಹಿ ಸಾರಿಗೆಗೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ. […]