ಉಡುಪಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಕುಕ್ಕುಂದೂರು ನಾಗೇಶ್ ಕಿಣಿ ನಿಧನ
ಉಡುಪಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂ ಸೇವಕ, ಕಡಿಯಾಳಿ ಹೋಟೆಲ್ ಶ್ರೀನಿವಾಸ್ ಮಾಲೀಕ ಕುಕ್ಕುಂದೂರು ನಾಗೇಶ್ ಕಿಣಿ ಅವರು ಸೋಮವಾರ ನಿಧನ ಹೊಂದಿದರು. ಅವರು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ ಸಹಿತ 6 ಪುತ್ರಿಯರು ಹಾಗೂ 5 ಪುತ್ರರನ್ನು ಅಗಲಿದ್ದಾರೆ. ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಆಡಳಿತ ಸಮಿತಿಯ ಮಾಜಿ ಸದಸ್ಯರು ಆಗಿದ್ದರು. ಉಡುಪಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಕಡಿಯಾಳಿ ಅವರ ನಿಧನಕ್ಕೆ ತೀವ್ರ ಸಂತಾಪವನ್ನು ಸೂಚಿಸಿದೆ.