ಕುಂದಾಪುರ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ವತಿಯಿಂದ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆ ಪ್ರಯುಕ್ತ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

ಕುಂದಾಪುರ:”ಇಂದು ಆಧುನಿಕ ಜಗತ್ತಿಗೆ ರಾಷ್ಟ್ರಪಿತ ಗಾಂಧೀಜಿ ನೀಡಿದ ಕೊಡುಗೆ ಮಹೋನ್ನತವಾದುದು. ಸತ್ಯ, ಅಹಿಂಸೆ, ಶಾಂತಿಯ ಮೂಲಕ ಜಗತ್ತಿಗೆ ಮಾದರಿಯಾದ ವ್ಯಕ್ತಿತ್ವವನ್ನು ಹೊಂದಿದವರು.ತನ್ನ ಬದುಕಿನಲ್ಲಿ ಸ್ವಚ್ಚತಾ ಮಹತ್ವವನ್ನು ಕುರಿತು ಇಡೀ ದೇಶದಲ್ಲಿ ಅರಿವು ಜಾಗೃತಿಯನ್ನು ತನ್ನ ಬದುಕಿನುದ್ದಕ್ಕೂ ಮೂಡಿಸಿದರು” ಎಂದು ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ ಹೇಳಿದರು. ಸುಜ್ಞಾನ್ ಎಜುಕೇಶನ್ ಟ್ರಸ್ಟ್ ಕುಂದಾಪುರ, ಸುಜ್ಞಾನ ಪದವಿಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ(ಲಿಟ್ಲ್ ಸ್ಟಾರ್) ಇಂಗ್ಲಿಷ್ ಮೀಡಿಯಂ ಸ್ಕೂಲ್ ಯಡಾಡಿ ಮತ್ಯಾಡಿ ಜೊತೆಯಾಗಿ ಆಯೋಜಿಸಿದ ಗಾಂಧಿ ಜಯಂತಿ […]