ಕುಂದಾಪುರ: ಅರ್ಹ ವ್ಯಕ್ತಿಗಳಿಗೆ ಪ್ರಶಸ್ತಿ ದೊರೆತಾಗ ಪ್ರಶಸ್ತಿಗೆ ಗೌರವ ಹೆಚ್ಚಾಗುತ್ತದೆ; ಡಾ.ತಲ್ಲೂರು ಶಿವರಾಮ ಶೆಟ್ಟಿ

ಕುಂದಾಪುರ: ನಿರಂತರವಾಗಿ ಯಕ್ಷಗಾನ ಚಿಂತನೆಯಲ್ಲಿರುವ ಸಾಧಕರಿಗೆ ಪ್ರಶಸ್ತಿ ಸಂದಿದೆ. ಅರ್ಹ ವ್ಯಕ್ತಿಗಳಿಗೆ ಪ್ರಶಸ್ತಿ ದೊರೆತಾಗ ಪ್ರಶಸ್ತಿಗೆ ಗೌರವ ಹೆಚ್ಚಾಗುತ್ತದೆ. ಈ ನಿಟ್ಟಿನಲ್ಲಿ ವಿದ್ವಾನ್ ಹಾಗೂ ಹಂದೆಯವರಿಗೆ ಪ್ರಶಸ್ತಿ ಲಭಿಸಿದೆ. ಇಪ್ಪತ್ತೈದು ವರ್ಷ ನೆಲೆಯನ್ನು ಕಂಡುಕೊಂಡು 108 ಕಾರ್ಯಕ್ರಮವನ್ನು ಹಮ್ಮಿಕೊಂಡ ಯಶಸ್ವೀ ಕಲಾವೃಂದಕ್ಕೆ ಸರ್ವರೂ ನೆರವಾಗಬೇಕು. ಅನೇಕ ಮಕ್ಕಳನ್ನು ರಂಗಕ್ಕೆ ತಂದ ಸಂಸ್ಥೆಯನ್ನು ಸರಕಾರವೂ ಗುರುತಿಸಬೇಕು ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ತೆಕ್ಕಟ್ಟೆ ಹಯಗ್ರೀವದಲ್ಲಿ ಯಶಸ್ವೀ ಕಲಾವೃಂದ ಕೊಮೆ ತೆಕ್ಕಟ್ಟೆಯ […]