ಕುಂದಾಪುರ:ಫುಟ್ಬಾಲ್ ಪಂದ್ಯಾಟ; ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ತಾಲೂಕು ಮಟ್ಟದಲ್ಲಿ ದ್ವಿತೀಯ.

ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ( ಪದವಿಪೂರ್ವ ವಿಭಾಗ ) ಮತ್ತು ಗುರುಕುಲ ಪದವಿ ಪೂರ್ವ ಕಾಲೇಜು ವಕ್ವಾಡಿ ಕೋಟೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ಕುಂದಾಪುರ ತಾಲೂಕು ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ – ಬಾಲಕಿಯರ ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ ಪಡೆದಿದೆ. ವಿದ್ಯಾರ್ಥಿಗಳೊಂದಿಗೆ ಕಾಲೇಜು ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ ದೈಹಿಕ ಶಿಕ್ಷಣ ಉಪನ್ಯಾಸಕ ರಾಘವೇಂದ್ರ ಗಾಣಿಗ ಉಪಸ್ಥಿತರಿದ್ದಾರೆ. […]