ಕುಂದಾಪುರ: ಹಿಜಾಬ್ ನಿರ್ಬಂಧ; ಬಿ.ಜಿ. ರಾಮಕೃಷ್ಣ ಅವರಿಗೆ ನೀಡಿದ್ದ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ತಡೆ.

ಕುಂದಾಪುರ: ಕುಂದಾಪುರದ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಬಿ.ಜಿ. ರಾಮಕೃಷ್ಣ ಅವರಿಗೆ ನೀಡಲಾಗಿದ್ದ ರಾಜ್ಯಮಟ್ಟದ ‘ಉತ್ತಮ ಶಿಕ್ಷಕ’ ಪ್ರಶಸ್ತಿಯನ್ನು ಶಾಲಾ ಶಿಕ್ಷಣ ಇಲಾಖೆ ತಡೆಹಿಡಿದಿದೆ. ರಾಮಕೃಷ್ಣ ಸೇರಿದಂತೆ ರಾಜ್ಯದ ಪದವಿಪೂರ್ವ ಕಾಲೇಜುಗಳ ಇಬ್ಬರು ಪ್ರಾಂಶುಪಾಲರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದ್ದ ಶಾಲಾ ಶಿಕ್ಷಣ ಇಲಾಖೆ ಮಂಗಳವಾರ ರಾತ್ರಿ ಪಟ್ಟಿ ಬಿಡುಗಡೆ ಮಾಡಿತ್ತು. ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ ಅವಧಿಯಲ್ಲಿ ನಡೆದಿದ್ದ ಹಿಜಾಬ್ ವಿವಾದದಲ್ಲಿ ರಾಮಕೃಷ್ಣ ಹೆಸರು ತಳಕು ಹಾಕಿಕೊಂಡಿತ್ತು. ಹಿಜಾಬ್ ಧರಿಸಿ ಬಂದಿದ್ದ ಮುಸ್ಲಿಂ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರಾಗಿದ್ದ ರಾಮಕೃಷ್ಣ ಕಾಲೇಜು […]