ಉಡುಪಿ:ನಿಷೇಧಾಜ್ಞೆ ಹಾಗೂ ಸಂತೆ, ಜಾತ್ರೆ ನಿಷೇಧ ಆದೇಶ ಹಿಂತೆಗೆತ -ಜಿಲ್ಲಾಧಿಕಾರಿ ಡಾ.ಕೆ ವಿದ್ಯಾ ಕುಮಾರಿ
ಉಡುಪಿ: ಕುಂದಾಪುರ ತಾಲೂಕಿನ ಅಮಾಸೆಬೈಲು ಗ್ರಾಮ ಪಂಚಾಯತ್ನ ಕ್ಷೇತ್ರದಲ್ಲಿ ಉಪ ಚುನಾವಣೆಯ ಮತದಾನ ನಡೆಯದೇ ಇರುವ ಹಿನ್ನೆಲೆ, ಸದರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನವೆಂಬರ್ 23 ರಂದು ಸಂತೆ ಮತ್ತು ಎಲ್ಲಾ ತರಹದಜಾತ್ರೆಗಳನ್ನು ನಿಷೇಧಿಸಿ, ಹೊರಡಿಸಿರುವ ಆದೇಶವನ್ನು ಹಾಗೂ ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಹೊರಡಿಸಿರುವ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.