ಉಡುಪಿ:ಕುವೆಂಪುರವರ ಕೃತಿಗಳಲ್ಲಿ ಬದುಕಿನ ಆಗಾಧತೆ ಮತ್ತು ವಿಸ್ತರತೆ ಅಡಗಿದೆ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಉಡುಪಿ: ಕನ್ನಡ ಸಾಹಿತ್ಯದಲ್ಲಿ ಕುವೆಂಪುರವರು ಒಬ್ಬ ಮೇರು ಕವಿಯಾಗಿದ್ದು, ಅವರ ಶ್ರೀ ರಾಮಾಯಣ ದರ್ಶನಂ, ಮಲೆಗಳಲ್ಲಿ ಮದುಮಗಳು, ಕಾನೂರು ಹೆಗ್ಗಡತಿಯಂತಹ ಮುಖ್ಯ ಕಾದಂಬರಿಗಳನ್ನು ಓದಿ ಬದುಕಿನ ಆಗಾಧತೆ ಮತ್ತು ವಿಸ್ತರತೆಯನ್ನು ತಿಳಿದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ರಾಷ್ಟ್ರಕವಿ ಕುವೆಂಪುರವರ ಜಯಂತಿ ಪ್ರಯುಕ್ತ ನಡೆದ ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ಶೋಕಾಚರಣೆ ಹಿನ್ನೆಲೆ, […]