ಮಹಿಳಾ ಯಕ್ಷಗಾನ ತಂಡಗಳು ಪ್ರಾರಂಭವಾಗುತ್ತಿರುವುದು ಕಲೆಗೆ ಹೆಚ್ಚಿನ ಶಕ್ತಿ ತುಂಬಿದೆ: ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಅಭಿಮತ

ಉಡುಪಿ: ಯಕ್ಷಗಾನ ಕರಾವಳಿಯ ಮಣ್ಣಿನ ಕಲೆ. ಇದರ ಬಗ್ಗೆ ಕೀಳರಿಮೆ ಬಿಟ್ಟು, ಅಬಾಲವೃದ್ಧರಾಗಿ ಯಕ್ಷಗಾನವನ್ನು ಆರಾಧಿಸುವ ಲಕ್ಷಾಂತರ ಮಂದಿ ಯಕ್ಷಗಾನ ಪ್ರೇಮಿಗಳಿದ್ದಾರೆ. ಅದರಲ್ಲೂ ಮಹಿಳಾ ಯಕ್ಷಗಾನ ತಂಡಗಳು ಪ್ರಾರಂಭಗೊಳ್ಳುತ್ತಿರುವುದು ಯಕ್ಷಗಾನ ಕಲೆಗೆ ಹೆಚ್ಚಿನ ಶಕ್ತಿ ತುಂಬಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಮಂಗಳವಾರ ಮಂಗಳೂರಿನ ಸಮತಾ ಮಹಿಳಾ ಬಳಗದ ಆಶ್ರಯದಲ್ಲಿ ಮಂಗಳೂರು ಜೈಲ್ ರೋಡ್‌ನ ಸುಬ್ರಹ್ಮಣ್ಯ ಸಭಾ ಭವನದಲ್ಲಿ ಯಕ್ಷ ಮಂಜುಳಾ ಕದ್ರಿ ಬಳಗದಿಂದ ಮಹಿಳಾ ಯಕ್ಷಗಾನ ಬಯಲಾಟ […]