ಲೇಕ್ 2024: 14ನೇ ದ್ವೈವಾರ್ಷಿಕ ಕೆರೆ ಸಮ್ಮೇಳನದ ಉದ್ಘಾಟನಾ ಸಮಾರಂಭ

ಮೂಡುಬಿದಿರೆ: ‘ಲೇಕ್ 2024’ ಸಮ್ಮೇಳನವು ಪ್ರಸ್ತುತ ಜ್ವಲಂತ ಸಮಸ್ಯೆಗಳಿಗೆ ಪ್ರಕೃತಿ ಆಧಾರಿತ ಪರಿಹಾರಗಳನ್ನು ಕಂಡುಕೊಳ್ಳುವ ಸುಸ್ಥಿರ ಹಾಗೂ ಸದುದ್ದೇಶಗಳನ್ನು ಹೊಂದಿದೆ ಎಂದು ಕರ್ನಾಟಕ ಜೀವವೈವಿಧ್ಯ ಮಂಡಳಿಯ ಮಾಜಿ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮೂಡುಬಿದಿರೆ, ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ(ಐಐಎಸ್‌ಸಿ) ಎನರ್ಜಿ ಆ್ಯಂಡ್ ವೆಟ್‌ಲ್ಯಾಂಡ್ಸ್ ರಿಸರ್ಚ್ ಗ್ರೂಪ್, ಇವುಗಳ ಜಂಟಿ ಆಶ್ರಯದಲ್ಲಿ ನಾಲ್ಕು ದಿನಗಳ ‘ಲೇಕ್2024- 14ನೇ ದ್ವೈವಾರ್ಷಿಕ ಕೆರೆ (ಸರೋವರ) ಸಮ್ಮೇಳನ’ವನ್ನು ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದ ಡಾ. […]