ಮುಡಾ ಹಗರಣದಿಂದ ಜನರ ಗಮನ ಬೇರೆಡೆ ಸೆಳೆಯಲು ‘ಲ್ಯಾಂಡ್ ಜಿಹಾದ್’ ಷಡ್ಯಂತ್ರ: ಕಿಶೋರ್ ಕುಮಾರ್ ಕುಂದಾಪುರ
ಉಡುಪಿ: ಮುಡಾ ಹಗರಣದಲ್ಲಿ ತನಿಖೆ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನತೆಯ ಗಮನವನ್ನು ಬೇರೆಡೆಗೆ ಸೆಳೆಯಲು ಜಮೀರ್ ಅಹ್ಮದ್ ಗೆ ಕುಮ್ಮಕ್ಕು ನೀಡಿ ವಕ್ಫ್ ಬೋರ್ಡ್ ಮೂಲಕ ‘ಲ್ಯಾಂಡ್ ಜಿಹಾದ್’ ಷಡ್ಯಂತ್ರವನ್ನು ರಚಿಸಿ ರಾಜ್ಯದ ಜನತೆಯನ್ನು ರೊಚ್ಚಿಗೆಬ್ಬಿಸಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆರೋಪಿಸಿದ್ದಾರೆ. ಭ್ರಷ್ಟಾಚಾರ ಮತ್ತು ಹಗರಣಗಳ ಸರಮಾಲೆಯಿಂದ ರಾಜ್ಯದ ಆರ್ಥಿಕತೆಯು ಸಂಪೂರ್ಣ ಹಳಿತಪ್ಪಿ ದಿವಾಳಿತನದ ಅಂಚಿಗೆ ತಲುಪಿದ್ದರೂ, ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ ಹತ್ತು ಸಾವಿರ ಕೋಟಿ ಅನುದಾನ ನೀಡುತ್ತೇನೆ ಎಂದು […]