ಉಡುಪಿ ವಕೀಲರ ಸಂಘ: ನೂತನ ಅಧ್ಯಕ್ಷರಾಗಿ ಬಿ. ನಾಗರಾಜ್, ಪ್ರಧಾನ ಕಾರ್ಯದರ್ಶಿಯಾಗಿ ರೆನೋಲ್ಡ್ ಪ್ರವೀಣ್ ಕುಮಾರ್ ಅವಿರೋಧ ಆಯ್ಕೆ
ಉಡುಪಿ: ಉಡುಪಿ ವಕೀಲರ ಸಂಘದ 2021-22 ಹಾಗೂ 2022-23 ನೇ ಸಾಲಿನ ಅಧ್ಯಕ್ಷರಾಗಿ ಬಿ. ನಾಗರಾಜ್ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ರೆನೋಲ್ಡ್ ಪ್ರವೀಣ್ ಕುಮಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಶಶೀಂದ್ರ ಕುಮಾರ್ ಶುಕ್ರವಾರ ಘೋಷಿಸಿದ್ದಾರೆ. ಬಿ. ನಾಗರಾಜ್ ಈ ಹಿಂದಿನ ಸಾಲಿನಲ್ಲಿ ವಕೀಲರ ಸಂಘದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ರೆನೋಲ್ಡ್ ಪ್ರವೀಣ್ ಕುಮಾರ್ ಕಳೆದ 4 ಅವಧಿಗಳಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಉಳಿದಂತೆ ಅವಿರೋಧವಾಗಿ ಆಯ್ಕೆಯಾಗಿರುವ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರ ವಿವರ ಈ ಕೆಳಗಿನಂತಿದೆ: […]