ಸಮಾಜದಲ್ಲಿ ನ್ಯಾಯ ನೆಲೆಯೂರುವಂತೆ ಮಾಡುವ ಜವಾಬ್ದಾರಿ ವಕೀಲರ ಮೇಲಿದೆ

ಉಡುಪಿ: ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ವಕೀಲರು ಬಹಳ ಮಹತ್ವದ ಪಾತ್ರ ವಹಿಸಿದ್ದರು. ಯುವ ವಕೀಲರು ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು. ಸಮಾಜದಲ್ಲಿ ನ್ಯಾಯ ನೆಲೆಯೂರುವಂತೆ ಮಾಡುವ ಜವಾಬ್ದಾರಿ ವಕೀಲರ ಮೇಲೆ ಇದೆ ಎಂದು ಸುಪ್ರೀಂ ಕೋರ್ಟಿನ ವಿಶ್ರಾಂತ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಹೇಳಿದರು. ಉಡುಪಿ ವಕೀಲರ ಸಂಘದ ವತಿಯಿಂದ ನ್ಯಾಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾದ ವಕೀಲರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಹೈಕೋರ್ಟಿನ 2025ನೇ ಸಾಲಿನ ಕ್ಯಾಲೆಂಡರನ್ನು ಹೋಲುವ ಸಂಘದಿಂದ ಹೊರತಂದಿರುವ ನೂತನ ಕ್ಯಾಲೆಂಡರನ್ನು ಬಿಡುಗಡೆ ಮಾಡಲಾಯಿತು. ನ್ಯಾಯಾಲಯ […]