ಕೇಂದ್ರದ್ದು ತಾರತಮ್ಯ ಬಜೆಟ್; ರಾಜ್ಯದ ಪಾಲಿಗೆ ನಿರಾಸೆ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಕರ್ನಾಟಕದ ರಾಜ್ಯಸಭಾ ಸದಸ್ಯೆಯೂ ಆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ರಾಜ್ಯದ ನಿರೀಕ್ಷೆಯನ್ನು ಹುಸಿಗೊಳಿಸಿದ್ದು, ಇದೊಂದು ತಾರತಮ್ಯ ಬಜೆಟ್ ಆಗಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಕೇಂದ್ರ ಬಜೆಟ್ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ. ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದು ಕಣ್ಣಿಗೆ ಸುಣ್ಣ ಎನ್ನುವಂತೆ ಬಜೆಟ್ ನಲ್ಲಿ ಕೆಲ ಅಂಶಗಳು ಬಿಂಬಿತವಾಗಿವೆ. ಎನ್ ಡಿಎ ಸರ್ಕಾರದ ಭಾಗವಾಗಿರುವ […]