ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟಿಸಲು ಬಿಜೆಪಿ ನಾಯಕರಿಗೆ ನೈತಿಕ ಹಕ್ಕಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜನ ಸಾಮಾನ್ಯರ ಪಾಲಿಗೆ ಹೊರೆಯಾಗುತ್ತಿದೆ. ಕೇಂದ್ರದ ವಿರುದ್ಧ ಮಾತನಾಡಲು ಆಗದ ರಾಜ್ಯ ಬಿಜೆಪಿ ನಾಯಕರು, ಜನಪರವಾಗಿರುವ ನಮ್ಮ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿಕಾರಿದರು. ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಸೋಮವಾರ ನಡೆದ ಕೇಂದ್ರ ಸರ್ಕಾರದ ವಿರುದ್ಧದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಸಚಿವರು, ಕರ್ನಾಟಕದಲ್ಲಿ ಸ್ವತಃ ಬಲದ ಮೇಲೆ ಅಧಿಕಾರಕ್ಕೇರಲು […]