ಕರ್ನಾಟಕದ ಗ್ಯಾರಂಟಿ ಯೋಜನೆಗಳು ಬೇರೆ ರಾಜ್ಯಗಳಿಂದ ಅನುಕರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಕರ್ನಾಟಕದಲ್ಲಿ ಜಾರಿಗೆ ತರಲಾಗಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಬೇರೆ ರಾಜ್ಯಗಳು ಕೂಡ ಅನುಸರಿಸುತ್ತಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ತಾಲೂಕು ಪಂಚಾಯತ್ ಕಟ್ಟದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಭಾರತ ದೇಶದ ಇತಿಹಾಸದಲ್ಲಿ ಇಂಥ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದ ಹೆಮ್ಮೆ ನಮ್ಮ ಸರ್ಕಾರದ್ದು ಎಂದರು. ಬೇರೆ ರಾಜ್ಯಗಳಲ್ಲೂ ನಮ್ಮ ಗ್ಯಾರಂಟಿ ಯೋಜನೆಗಳ ಮಾದರಿಯನ್ನು ‌ಜಾರಿಗೆ ತರಲಾಗುತ್ತಿದೆ. ಭಾರತದ […]