ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಡುಪಿ ಜಿಲ್ಲೆಯನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ- ಬಿಜೆಪಿ ಸದಸ್ಯರ ಆರೋಪ

ಉಡುಪಿ: ಉಸ್ತುವಾರಿ ಸಚಿವೆ ಲಕ್ಷ್ಮೀಹೆಬ್ಬಾಳ್ಕರ್ ಅವರು ಉಡುಪಿ ಜಿಲ್ಲೆಯನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಗಾಳಿಮಳೆಯಿಂದ ಸಾಕಷ್ಟು ಅನಾಹುತಗಳು ಸಂಭವಿಸಿವೆ. ಆದರೂ ಸಚಿವೆ ಹೆಬ್ಬಾಳ್ಕರ್ ಜಿಲ್ಲೆಗೆ ಆಗಮಿಸಿ ಜನರ ಸಮಸ್ಯೆಯನ್ನು ಆಲಿಸಿಲ್ಲ ಎಂಬ ಬಿಜೆಪಿ ಸದಸ್ಯರ ಆರೋಪವು ಇಂದು ನಡೆದ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಮೊದಲು ವಿಷಯ ಪ್ರಸ್ತಾಪಿಸಿದ ಬಿಜೆಪಿ ಸದಸ್ಯ ವಿಜಯಲಕ್ಷ್ಮಿ, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈವರೆಗೂ ನಗರಸಭೆಯ ಸದಸ್ಯರ ಮುಖವನ್ನೇ ನೋಡಿಲ್ಲ. ಇನ್ನೂ ನಮ್ಮ […]