ಉಡುಪಿ:ಮನುಷ್ಯನ ಜೀವನ ಶೈಲಿ ಸುಧಾರಣೆಯಿಂದ ಉತ್ತಮ ಆರೋಗ್ಯ ಹೊಂದಲು ಸಾಧ್ಯ : ಡಾ. ಸುಶೀಲ್ ಜತ್ತನ್ನ

ಉಡುಪಿ: ಆಧುನಿಕ ಯುಗದಲ್ಲಿ ಮನುಷ್ಯ ಒತ್ತಡದ ನಡುವೆ ತಮ್ಮ ದೈನಂದಿನ ಕಾರ್ಯವನ್ನು ನಿರ್ವಹಿಸುತ್ತಾರೆ. ಇದರಿಂದ ಹೊರಬರಲು ಜೀವನಶೈಲಿಯಲ್ಲಿ ಬದಲಾವಣೆ ಕಂಡುಕೊಂಡರೆ ಮಾತ್ರ ಉತ್ತಮ ಆರೋಗ್ಯ ಹೊಂದಲು ಸಹಾಯವಾಗುತ್ತದೆ ಎಂದು ಸಿ.ಎಸ್.ಐ. ಲೊಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತೆಯ ನಿರ್ದೇಶಕ ಡಾ. ಸುಶೀಲ್ ಜತ್ತನ್ನ ಹೇಳಿದರು. ಅವರು ಇಂದು ನಗರದ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ರಾಜ್ಯ ಮತ್ತು ಉಡುಪಿ ಜಿಲ್ಲಾ ಶಾಖೆ, ಯೆನಪೋಯ ಮೆಡಿಕಲ್ ಕಾಲೇಜು ದೇರಳಕಟ್ಟೆ ಮಂಗಳೂರು, ಸಿ.ಎಸ್.ಐ. ಲೊಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆ, […]