Tag: #udupi #lockdown #dc #no
-
ಉಡುಪಿಯಲ್ಲಿ ಲಾಕ್ ಡೌನ್ ಇಲ್ಲ,14 ದಿನಗಳ ಕಾಲ ಗಡಿ ಸೀಲ್ ಡೌನ್: ಡಿಸಿ ನೇತೃತ್ವದ ಸಭೆಯಲ್ಲಿ ನಿರ್ಧಾರ
ಉಡುಪಿ: ಜಿಲ್ಲೆಯಲ್ಲಿ ಲಾಕ್ ಡೌನ್ ಬದಲು 14 ದಿನಗಳ ಕಾಲ ಜಿಲ್ಲೆಯ ಗಡಿಗಳನ್ನು ಸೀಲ್ ಡೌನ್ ಮಾಡಲು ತೀರ್ಮಾನಿಸಲಾಗಿದೆ. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್ ನೇತೃತ್ವದಲ್ಲಿ ನಡೆದ ಜಿಲ್ಲಾ ಶಾಸಕರ ಹಾಗೂ ಅಧಿಕಾರಿಗಳ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಜುಲೈ 15ರ ಬುಧವಾರ ರಾತ್ರಿ 8 ಗಂಟೆಯವರೆಗೆ ಜಿಲ್ಲಾ ಗಡಿ ಭಾಗದಿಂದ ಒಳ ಬರುವವರಿಗೆ ಮತ್ತು ಹೊರ ಹೋಗುವವರಿಗೆ ಅವಕಾಶ ಕಲ್ಪಿಸಲಾಗುವುದು. ಬಳಿಕ 14 ದಿನಗಳ ಕಾಲ ಜಿಲ್ಲೆಯ ಗಡಿಗಳನ್ನು ಸಂಪೂರ್ಣ ಮುಚ್ಚಲಾಗುವುದು…