ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಗ್ರಾಹಕರ ಸಮಾವೇಶ ಉದ್ಘಾಟನೆ

ಉಡುಪಿ: ಗ್ರಾಹಕರಿಗೆ ಉತ್ತಮ ಸೇವೆ ಒದಗಿಸುವುದರ ಜತೆಗೆ ಸಂಸ್ಥೆಯ ಉನ್ನತಿಗೆ ಸಿಬ್ಬಂದಿ ಮುತುವರ್ಜಿಯಿಂದ ಶ್ರಮವಹಿಸಿದರೆ ಸಂಸ್ಥೆ ಅಭಿವೃದ್ಧಿ ಪಥದತ್ತ ಸಾಗಲು ಸಾಧ್ಯವಿದೆ ಎಂದು ಅಂಬಲಪಾಡಿ ಡಾ. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ನಾಡೋಜ ಡಾ. ಜಿ ಶಂಕರ್ ಹೇಳಿದರು. ಅವರು ಶನಿವಾರ ನಗರದ ಶೇಷಶಯನ ಸಭಾಂಗಣದಲ್ಲಿ ನಡೆದ ಉಡುಪಿ ಮಹಾಲಕ್ಷ್ಮೀ ಕೋ ಆಪರೇಟಿವ ಬ್ಯಾಂಕ್ ನ ಗ್ರಾಹಕರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಯಶ್ ಪಾಲ್ ಸುವರ್ಣ ಅವರ ನೇತೃತ್ವದಲ್ಲಿ ಅವರ ಹಾಗೂ ನಿರ್ದೇಶಕರುಗಳ ಶ್ರಮದ ಫಲವಾಗಿ […]