ಉಡುಪಿ: ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ
![](https://udupixpress.com/wp-content/uploads/2024/10/1000031413-1024x417.jpg)
ಉಡುಪಿ: ಮಹರ್ಷಿ ವಾಲ್ಮೀಕಿ ಸಂಘಟನೆ ಉಡುಪಿ ಜಿಲ್ಲೆಯ ವತಿಯಿಂದ ಜಯಂತ್ಯೋತ್ಸವವನ್ನು ಉಡುಪಿಯ ಮಥುರಾ ಕಂಫರ್ಟ್ಸ್ ನಲ್ಲಿ ಆಯೋಜಿಸಲಾಗಿತ್ತು. ಉದ್ಯಮಿ ವಿಶ್ವನಾಥ ಶೆಣೈ ಯವರು ವಾಲ್ಮೀಕಿ ಮಹರ್ಷಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಕಲಾರಾಧಕ, ಕಲಾವಿದ ಪಾಡಿಗಾರು ಲಕ್ಷ್ಮೀ ನಾರಾಯಣ ಉಪಾಧ್ಯ ಇವರನ್ನು ಗೌರವಿಸಿ ಅಭಿನಂದಿಸಲಾಯಿತು. ಭಾರತ್ ಸ್ಕೌಟ್ ಜಿಲ್ಲಾ ಆಯುಕ್ತ ಜನಾರ್ದನ್ ಕೊಡವೂರು ಮಾತನಾಡಿ ಸಂಘಟನೆಯಲ್ಲಿ ಬಲವಿದೆ. ಒಟ್ಟಾಗಿ ಸೇರಿ ಕೆಲಸ ಮಾಡಿದಾಗ ಸರಕಾರದ ಮಟ್ಟಕ್ಕೂ ನಮ್ಮ ಬೇಡಿಕೆಯನ್ನು ತಲುಪಿಸಲು ಸಾಧ್ಯ ಎಂದರು. ಕನ್ನಡ […]