ಉಡುಪಿ:’ಇನ್ನು ಇಲ್ಲಿ ಕೆಲಸ ಮಾಡುವುದು ಕಷ್ಟ, ಊರಿಗೆ ಹೋಗುತ್ತೇನೆ”: ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ಹಲ್ಲೆಗೊಳಗಾದ ಸಂತ್ರಸ್ತೆ

ಮಲ್ಪೆ: ‘ಅವತ್ತು ನಾನು ಸ್ವಲ್ಪ ಮೀನು ತೆಗೆದಿದ್ದೆ. ಅದಕ್ಕೆ ಅವರು ಮೀನು ಕದ್ದಿದಾಳೆ ಎಂದು ಹೇಳಿ ನನಗೆ ಹಲ್ಲೆ ಮಾಡಿದರು. ಈ ಘಟನೆ ನಡೆದ ಬಳಿಕ ನಾನು ಬಂದರಿಗೆ ಹೋಗಿಲ್ಲ. ಇನ್ನು ಇಲ್ಲಿ ಕೆಲಸ ಮಾಡುವುದು ಕಷ್ಟ. ಅದಕ್ಕೆ ನಾನು ಊರಿಗೆ ಹೋಗುತ್ತೇನೆ’ ಇದು ಮಲ್ಪೆ ಬಂದರಿನಲ್ಲಿ ಮಾ.18ರಂದು ಮೀನು ಕದ್ದ ಆರೋಪದಲ್ಲಿ ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣದ ಸಂತ್ರಸ್ತೆ ಲಕ್ಕೀಬಾಯಿ ಅವರ ಹೇಳಿಕೆ. ಮಲ್ಪೆಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ಅವರ ಮೇಲೆ ಯಾವುದೇ […]

ಉಡುಪಿ: ಮಲ್ಪೆ ಬಂದರಿನಲ್ಲಿ ಮಹಿಳೆಗೆ ಹಲ್ಲೆ ಪ್ರಕರಣ; ಅಪರಾಧಿಗಳ ವಿರುದ್ಧ ಕಠಿಣ ಕ್ರಮಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ.

ಬೆಂಗಳೂರು: ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ‌ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆ ಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಅಪರಾಧಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ. ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಘಟನೆ. ಮಾಹಿತಿ ಬಂದ ತಕ್ಷಣ ಅಧಿಕಾರಿಗಳ ಜೊತೆ ಮಾತನಾಡಿ ಕಠಿಣ ಕ್ರಮಕ್ಕೆ ಸೂಚಿಸಿದ್ದೇನೆ. ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ಪ್ರಕರಣದ ಹಿಂದೆ ಇನ್ನೂ ಯಾರಿದ್ದಾರೆ ಎಂದು ತನಿಖೆ […]

ಮೀನು ಕದ್ದ ಆರೋಪ ಕಾರಣಕ್ಕೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದು ಅಮಾನವೀಯ ವರ್ತನೆ- ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲೀಯೋ ಹೇಳಿಕೆ

ಉಡುಪಿ:ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿರುವ ಅಮಾನವೀಯ ವರ್ತನೆ ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಲ್ಲಿ ನಡೆದಿದ್ದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲೀಯೋ ಖಂಡಿಸಿದ್ದಾರೆ. ಘಟನೆಗೆ ಸಂಬಂಧಿಸಿ ಈಗಾಗಲೇ ಪೊಲೀಸರು ನಾಲ್ವರು ವ್ಯಕ್ತಿಗಳನ್ನು ಬಂಧಿಸಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದು ಇದರ ಜೊತೆಗೆ ಒರ್ವ ಮಹಿಳೆಯ ಮೇಲೆ ಅಮಾನುಷ ವರ್ತನೆ ತೋರುತ್ತಿದ್ದಾಗ ಮೂಕ ಪ್ರೇಕ್ಷಕರಂತೆ ವರ್ತಿಸಿದ ಸಾರ್ವಜನಿಕರ ನಡೆ ಕೂಡ ಖಂಡನೀಯವಾಗಿದೆ. ಮಹಿಳೆಯಿಂದ ತಪ್ಪು ನಡೆದಿದ್ದರೂ ಸಹ ಆಕೆಯ ಮೇಲೆ ಹಲ್ಲೆ ನಡೆಸುವ ಬದಲು ಪೊಲೀಸರಿಗೆ […]

ಮಲ್ಪೆ ಬಂದರಿನಲ್ಲಿ ಮಹಿಳೆಗೆ ಹಲ್ಲೆ; ಹಲ್ಲೆ ನಡೆಸಿದವರ ವಿರುದ್ಧ ಸೂಕ್ತ ಕ್ರಮ- ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

ಉಡುಪಿ: ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಡಿ ಮಹಿಳೆಗೆ ಹಲ್ಲೆ ನಡೆಸಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಹಲ್ಲೆ ನಡೆಸಿದವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಎಸ್ಪಿಗೆ ಸೂಚಿಸಿದ್ದೇನೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಈ ಕುರಿತು ಪ್ರತಿಕ್ರಿಯಿಸಿದ ಅವರು, ಹಲ್ಲೆ ನಡೆಸುವುದು ತಪ್ಪು. ಸಣ್ಣ ತಪ್ಪಿಗೆ ಆ ರೀತಿ ಹೊಡೆಯುವುದು ಸರಿಯಲ್ಲ. ಮಹಿಳೆಗೆ ಹೊಡೆಯುತ್ತಿದ್ದಾರೆ ಅಲ್ಲಿ ಸೇರಿರುವ ಜನರು ನಗುತ್ತಾ ನಿಂತಿದ್ದಾರೆ. ಯಾರು ತಡೆಯಲು‌ ಮುಂದಾಗುತ್ತಿಲ್ಲ. ಈ ರೀತಿಯಾಗಿ ನಮ್ಮ ಮನಸ್ಥಿತಿ ಹೋದರೆ […]