ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶ ವಲಸಿಗರ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಯಶ್ಪಾಲ್ ಸುವರ್ಣ ಆಗ್ರಹ

ಉಡುಪಿ: ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದು, ದೇಶದ ಭದ್ರತೆಯ ದೃಷ್ಟಿಯಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆ ನಡೆಸುವಂತೆ ರಾಜ್ಯ ಸರ್ಕಾರದ ಗೃಹ ಇಲಾಖೆಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ ಮಾಡಿದ್ದಾರೆ. ಏಷ್ಯಾದ ಅತೀ ದೊಡ್ಡ ಮೀನುಗಾರಿಕಾ ಬಂದರಾಗಿ ಗುರುತಿಸಿಕೊಂಡಿರುವ ಮಲ್ಪೆ ಬಂದರಿನಲ್ಲಿ ಕೆಲಸಕ್ಕಾಗಿ ಬಂದು ಅಕ್ರಮವಾಗಿ ಬಾಂಗ್ಲಾ ಪ್ರಜೆಗಳು ನೆಲೆಸಿರುವುದು ಆತಂಕಕಾರಿ ಬೆಳವಣಿಗೆಯಾಗಿದ್ದು, ಪೊಲೀಸರು ತಕ್ಷಣ ಅಕ್ರಮ ವಲಸಿಗರಿಗೆ ಸಹಕರಿಸಿದವರನ್ನು ತಕ್ಷಣ ಬಂಧಿಸಿ […]