ಉಡುಪಿ:ಪ್ರತಿಯೊಬ್ಬರೂ ಗ್ರಾಹಕರ ರಕ್ಷಣೆಯ ಹಕ್ಕುಗಳ ಕುರಿತು ಮಾಹಿತಿ ಹೊಂದಿರುವುದು ಅವಶ್ಯ : ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್

ಉಡುಪಿ: ಗ್ರಾಹಕರ ರಕ್ಷಣೆಗಾಗಿಯೇ ಅನೇಕ ಹಕ್ಕು ಮತ್ತು ಕಾನೂನುಗಳಿವೆ. ಇವುಗಳನ್ನು ಪ್ರತಿಯೊಬ್ಬರೂ ತಿಳಿದುಕೊಂಡಾಗ ಮಾತ್ರ ದೈನಂದಿನ ಸರಕು ಮತ್ತು ಸೇವೆಗಳನ್ನು ಪಡೆಯುವಲ್ಲಿ ಕೆಲವೊಮ್ಮೆ ಎದುರಿಸುವ ವಂಚನೆ ಮತ್ತು ಮೋಸದಿಂದ ಪಾರಾಗಲು ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದರು. ಅವರು ಇಂದು ನಗರದ ಎಸ್.ಎಮ್.ಎಸ್.ಪಿ ಸಂಸ್ಕೃತ ಅಧ್ಯಯನ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ, ಬಳಕೆದಾರರ […]