ಉಡುಪಿ: ಬಾರ್ ಶೌಚಾಲಯದಲ್ಲಿ ವ್ಯಕ್ತಿ ಮ್ಯತ್ಯು

ಉಡುಪಿ: ಬೀಡಿನಗುಡ್ಡೆ ಹೀರೆನ್ ಬಾರಿನ ಶೌಚಾಲಯದಲ್ಲಿ ಅಪರಿಚಿತ ವ್ಯಕ್ತಿಯೊರ್ವರು ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ. ಮೂತ್ರ ಮಾಡಲು ಶೌಚಾಲಯಕ್ಕೆ ತೆರಳಿದ ವೇಳೆ ಅಲ್ಲೇ ಕುಸಿದುಬಿದ್ದು ವ್ಯಕ್ತಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಮೃತ ವ್ಯಕ್ತಿ ರುದ್ರಪ್ಪ (50) ಎಂದು ಎನ್ನಲಾಗಿದೆ. ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ಶವವನ್ನು ರಕ್ಷಿಸಿಡಲು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಸಹಕರಿಸಿದರು. ಸಂಬಂಧಿಕರು ತುರ್ತಾಗಿ ಅಜ್ಜರಕಾಡು ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ. ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.