ಮಂಡ್ಯದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಹಿಂಸಾಚಾರ ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
![](https://udupixpress.com/wp-content/uploads/2024/09/IMG_20240913_102244.jpg)
ಉಡುಪಿ: ಮಂಡ್ಯದ ನಾಗಮಂಗಲದಲ್ಲಿ ಗಣೇಶೋತ್ಸವದ ಮೆರವಣಿಗೆ ವೇಳೆ ನಡೆದ ಹಿಂಸಾಚಾರ ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ಅಜ್ಜರಕಾಡಿನ ಹುತಾತ್ಮರ ಸ್ಮಾರಕದ ಬಳಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ಉದ್ದೇಶಿಸಿ ವಕ್ತಾರ ಶ್ರೀಕಾಂತ್ ಶೆಟ್ಟಿ ಮಾತನಾಡಿ, ಭಾರತದಲ್ಲಿ ಅಲ್ಪಸಂಖ್ಯಾತರು ಬಹುಸಂಖ್ಯಾತರ ಧಾರ್ಮಿಕ ಕೇಂದ್ರಗಳ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿದ್ದಾರೆ. ಹಿಂದೂ ಹಬ್ಬಗಳನ್ನು ಆಚರಿಸಲು ಸವಾಲು ಎದುರಿಸುವಂತಾಗಿದೆ. ಇಷ್ಟೊಂದು ದಾಳಿ ಆಗುತ್ತಿದ್ದರೂ ಹಿಂದೂಗಳು ಮಾತ್ರ ದೂರು ದಾಖಲಿಸಲು ಸೀಮಿತರಾಗಿದ್ದಾರೆ. ಈ ವ್ಯವಸ್ಥೆ ಹಿಂದೂಗಳ ಕೈ ಕಟ್ಟಿಹಾಕಿದೆ. ಮಂಡ್ಯ ಘಟನೆಯಲ್ಲಿ […]