ಮಂಗಳೂರು: ಯುವತಿ ನಾಪತ್ತೆ.

ಮಂಗಳೂರು: ಮೊಬೈಲ್‌ನಲ್ಲಿ ಪಬ್‌ಜಿ ಆಟವಾಡುವ ಹವ್ಯಾಸವಿದ್ದ ಬಿಜೈಯ ಯುವತಿಯೋರ್ವಳು ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ನಾಪತ್ತೆಯಾದ ಯುವತಿ ಕೆಲಿಸ್ತಾ ಫೆರಾವೊ (18). ಇವರು ಎಸೆಸೆಲ್ಸಿ ಬಳಿಕ ಆಟೊಮೊಬೈಲ್‌ ಕೋರ್ಸ್‌ಗೆ ಸೇರ್ಪಡೆಗೊಂಡಿದ್ದರು. ಈಕೆ ಮಂಗಳವಾರ ಮಧ್ಯಾಹ್ನ 12.15ರ ಸುಮಾರಿಗೆ ಮನೆಯಿಂದ ಹೊರಗೆ ಹೋಗಿದ್ದರು‌.‌ ಇದು ಮನೆಯವರ ಗಮನಕ್ಕೆ ಬಂದ ಕೂಡಲೇ ಅವರು ಹುಡುಕಾಟ ಆರಂಭಿಸಿದರು. ಸಿಸಿ ಕೆಮರಾವೊಂದನ್ನು ಪರಿಶೀಲಿಸಿದಾಗ ಈಕೆ ಆಟೋರಿಕ್ಷಾದಲ್ಲಿ ಹೋಗುತ್ತಿರುವ ದೃಶ್ಯ ದಾಖಲಾಗಿತ್ತು. ಕೆಲಿಸ್ತಾ ಕನ್ನಡ, ತುಳು, ಇಂಗ್ಲಿಷ್‌, ಕೊಂಕಣಿ ಭಾಷೆಗಳನ್ನು ಮಾತನಾಡುತ್ತಾಳೆ. ಬಿಳಿ […]