ಇಂದು ಉಡುಪಿ, ದ.ಕ ಹಾಗೂ ಮಲೆನಾಡಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ: ಮೀನುಗಾರರು ಎಚ್ಚರಿಕೆಯಿಂದಿರಲು ಸೂಚನೆ

ಮಂಗಳೂರು: ರಾಜ್ಯದಲ್ಲಿ ಕರಾವಳಿ ಜಿಲ್ಲೆಗಳಾದ ಉಡುಪಿ, ದ.ಕ ಹಾಗೂ ಚಿಕ್ಕಮಗಳೂರು, ಮಲೆನಾಡಿನಲ್ಲಿ ಜು.25ರಂದು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಮೀನುಗಾರರು ಎಚ್ಚರಿಕೆಯಿಂದಿರಲು ಸೂಚಿಸಿದೆ.‌ ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ವಿಜಯಪುರ, ಕಲಬುರಗಿ, ಚಿಕ್ಕಮಗಳೂರು, ಶಿವಮೊಗ್ಗ ಸೇರಿ ರಾಜ್ಯ ವಿವಿಧೆಡೆ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಗಾಳಿಯ […]