ಕರ್ನಾಟಕ ಪ್ರೆಸ್ ಕ್ಲಬ್ ಉಡುಪಿ ವತಿಯಿಂದ ಪತ್ರಿಕಾ ದಿನಾಚರಣೆ

ಉಡುಪಿ, ಜು.1: ಕರ್ನಾಟಕ ಪ್ರೆಸ್ ಕ್ಲಬ್ ಉಡುಪಿ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಹೋಟೆಲ್ ಮಥುರಾ ಛಥುರಾ ಸಭಾಂಗಣದಲ್ಲಿ ಇಂದು ನಡೆಯಿತು. ಕಾರ್ಯಕ್ರಮವನ್ನು ಎಂಜಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸುಚಿತ್ ಕೋಟ್ಯಾನ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಕನ್ನಡದ ಮೊದಲ ಪತ್ರಿಕೆ ಮಂಗಳೂರು ಸಮಾಚಾರ ಆರಂಭಗೊಂಡ ದಿನವನ್ನು ಪತ್ರಿಕಾ ದಿನವನ್ನಾಗಿ ರಾಜ್ಯಾದ್ಯಂತ ಆಚರಿಸಲಾಗುತ್ತಿದೆ. ರೆವರೆಂಡ್ ಹರ್ಮನ್ ಮೊಗ್ಲಿoಗ್ ಅವರು 1843 ಜುಲೈ 1 ರಂದು ಮಂಗಳೂರು ಸಮಾಚಾರ ಪತ್ರಿಕೆಯನ್ನು […]